ಬೆಂಗಳೂರು ನಗರದಲ್ಲಿ ಇಂದು 3161 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 160205 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 1672 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಇದುವರೆಗೆ 114208 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 33 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2340 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 129 ಮಂದಿ ಸೋಂಕಿಗೆ ಬಲಿಯಾಗಿದ್ದು. ಕರ್ನಾಟಕದಲ್ಲಿ ಸಾವಿನ ಸಂಖ್ಯೆ 6937 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 9217 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 430947 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 768 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.