ಭಾರತೀಯ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ – ಕೇಂದ್ರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

0

 ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಈ ಬೆನ್ನಲ್ಲೀ ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರುವ ಎಚ್​​ಡಿಕೆ, ದೇಶದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ. ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಎಚ್​ಡಿಕೆ ಹೀಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here