ಭಾರತೀಯ ರೈಲ್ವೆಯಿಂದ 1.40 ಲಕ್ಷ ಹುದ್ದೆ ಭರ್ತಿ: ಡಿ.15ರಿಂದ ಪ್ರಕ್ರಿಯೆ ಶುರು

0

ಭಾರತೀಯ ರೈಲ್ವೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ.

ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಕರೊನಾ ಬಿಕ್ಕಟ್ಟು ಶುರುವಾಗುವ ಮುನ್ನ ಕರೆದಿದ್ದ ಅರ್ಜಿಗಳಿವು. ಅವುಗಳ ನೇಮಕಾತಿ ಪ್ರಕ್ರಿಯೆ ಡಿ.15ರಿಂದ ಆರಂಭವಾಗಲಿದೆ.

ನಮಗೆ 2.42 ಕೋಟಿ ಅರ್ಜಿಗಳು ಬಂದಿವೆ. ಅರ್ಜಿಗಳನ್ನು ಮುಂದಿನ ಹಂತಕ್ಕಾಗಿ ಈಗಾಗಲೇ ಅಂತಿಮಗೊಳಿಸಲಾಗಿದೆ. ಆದರೆ ಕರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಾಧ್ಯವಾಗಿರಲಿಲ್ಲ ಎಂದು ವಿ.ಕೆ.ಯಾದವ್ ವಿವರಣೆ ನೀಡಿದ್ದಾರೆ.

ಗಾರ್ಡ್​, ಕ್ಲರ್ಕ್​, ಟ್ರ್ಯಾಕ್​ ನಿರ್ವಹಣಕಾರ, ಪಾಯಿಂಟ್ಸ್​ಮೆನ್​ಗ ಹುದ್ದೆಗಳಿನ್ನು ಇದು ಒಳಗೊಂಡಿದೆ. ಈ ಕುರಿತು ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಕೂಡ ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮೂರು ವಿಭಾಗಗಳಲ್ಲಿ (Non Technical Popular Categories(guards, clerks etc), Isolated & Ministerial ಹಾಗೂ Level 1(track maintainers, pointsman etc) ಪರೀಕ್ಷೆ ನಡೆಯಲಿರುವುದಾಗಿ ಸಚಿವರು ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here