ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

0

ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಹುಸಿಕರೆ ಬಂದ ಹಿನ್ನೆಲೆಯಲ್ಲಿ ಕೆಲವು ಗಂಟೆಗಳ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಗಳೂರು ಗಲಭೆ ಹಾಗೂ ಶಂಕಿತ ಉಗ್ರನ ಬಂಧನ ವರದಿಗಳ ಬೆನ್ನಲ್ಲೇ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ ಹುಸಿ ಬಾಂಬ್ ಕರೆ ಬಂದಿದೆ.

ಬಾಂಬ್ ಕರೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು, ಶ್ವಾನದಳ ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತು.

ಯಾರೋ ಕಿಡಿಗೇಡಿಗಳು ಕರೆ ಮಾಡಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here