ಮಗು ಸಾವು ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ | ಜಾಗರೂಕರಾಗಿರಿ

0

ಮಗು ಸಾವು ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ | ಜಾಗರೂಕರಾಗಿರಿ

ಮಂಡ್ಯ: ಜಾಗರೂಕರಾಗಿರಿ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ . ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮೂರು ವರ್ಷದ ಕಂದಮ್ಮ

ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದಾರೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿಯ ಮನೆಯಾಗಿದೆ.

ಈ ವೇಳೆ ಮಹಡಿಯ ಮೇಲಿನ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದೆ. ಆಗ ಮಗು ಮುಗ್ಗರಿಸಿ ಕೆಳಗೆ ಬಿದ್ದಿದೆ. ಜಾಗರೂಕರಾಗಿರಿ ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here