ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಾದರಿಯಾದ ಕಿಚ್ಚ ಸುದೀಪ್

0

ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ಮತ್ತೆ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಶಾಲೆಗಾಗಿ ನಾವು-ನೀವು ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ.

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಇಂಟರ್ನೆಟ್ ವ್ಯವಸ್ಥೆ, ಶೌಚಾಲಯ ನಿರ್ಮಾಣ, ಗ್ರಂಥಾಲಯ ವ್ಯವಸ್ಥೆ, ಕಂಪ್ಯೂಟರ್, ಕೊಠಡಿಗಳ ರಿಪೇರಿ, ಶಿಕ್ಷಕರಿಗೆ ಲಾಕರ್ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಶುದ್ಧ ಕುಡಿಯುವ ನೀರಿನ ಘಟಕ, ಆಟದ ಸಾಮಗ್ರಿಗಳು ಮುಂತಾದ ಅಗತ್ಯತೆಗಳನ್ನು ಪೂರೈಸಲು ಟ್ರಸ್ಟ್ ನಿರ್ಧರಿಸಿದೆ.

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ ನಾಲ್ಕು ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿರುವುದು ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಎಂದು ಸುಧಾಕರ್ ಹೇಳಿದ್ದಾರೆ.

ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿತ್ತು. ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here