ಮತ್ತೋರ್ವ ಬಾಲಿವುಡ್ ನಟನಿಗೂ ಕೊರೊನಾ ಸೋಂಕು

0

ಮುಂಬೈ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬಾಲಿವುಡ್ ನಟ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಈ ಕುರಿತು ಸ್ವತ: ಅರ್ಜುನ್ ಕಪೂರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ತಮಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಹೋಂ ಐಸೋಲೇಶನ್ ನಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ನನಗೆ ಕೊರೊನಾ ಸೋಂಕು ತಗುಲಿರೋದು ನಿಮಗೆ ತಿಳಿಸುವುದು ನನ್ನ ಕರ್ತವ್ಯ. ಸದ್ಯ ನಾನು ಆರೋಗ್ಯವಾಗಿದ್ದು, ಕೆಲ ಕೊರೊನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಆರೋಗ್ಯದ ಅಪ್‍ಡೇಟ್ ನೀಡುತ್ತಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here