ಮನೆಗಳ್ಳತನ ತಡೆಯಲು ಮಾಸ್ಟರ್ ಪ್ಲಾನ್ ರೂಪಿಸಿದ ಮಂಡ್ಯ ಪೊಲೀಸ್ ಇಲಾಖೆ…!

0

ಪಟ್ಟಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಗಳ್ಳತನವನ್ನು ತಡೆಯಲು ಮಂಡ್ಯ ಜಿಲ್ಲಾ ಪೋಲಿಸ್ ವತಿಯಿಂದ ಜಾರಿಗೆ ತಂದಿರುವ ಸುಬಾಹುಆ್ಯಾಫ್ ಬಗ್ಗೆ ಅರಿವಿನ ಜಾಗೃತಿ ಮೂಡಿಸುವ ಕರಪತ್ರವನ್ನು ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಬಿಡುಗಡೆ ಮಾಡಿದರು.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯಲ್ಲಿ ಮನೆಗಳ್ಳತನವನ್ನು ತಡೆಯಲು ಸುಬಾಹು ಆಫ್ ವರದಾನವಾಗಿದೆ. ಮನೆಯಿಂದ ಹೊರಗೆ ಹೋಗುವವರು ಈ ಆಪ್ ಅನ್ನು ಪ್ಲೇಸ್ಟೋರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು.ಬಳಕೆ ಮಾಡಿಕೊಂಡು ಮಾಹಿತಿಯನ್ನು ಆಫ್ ನಲ್ಲಿ ಹಾಕಿದರೆ ಸಾಕು, ಪೋಲಿಸರು ಬೀಗ ಹಾಕಿರುವ ಮನೆಯ ಮೇಲೆ ನಿಗಾವಹಿಸಿ ಕಳ್ಳತನ ತಡೆಯಲು ಸಾಧ್ಯವಾಗಲಿದೆ.

ಆದ್ದರಿಂದ ಪಟ್ಟಣದ ನಿವಾಸಿಗಳು ಸುಭಾಹು ಆಫ್ ನ ಸದ್ಭಳಕೆ ಮಾಡಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ಶಿವಮೂರ್ತಿ, ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಗಳಾದ ಬಿ.ಪಿ.ಬ್ಯಾಟರಾಯಗೌಡ, ಡಿ.ಲಕ್ಷ್ಮಣ,

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ, ಯುವಮುಖಂಡ ಮೈಲಾರಿರವಿ, ಮತ್ತು ಪುರಸಭೆಯ ಸದಸ್ಯರುಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here