ಮನೆಯಲ್ಲಿ ಮಕ್ಕಳಿದ್ದರೆ ಅವರಿಗೆ ಮನೆ, ಜಮೀನು ಸಂಪಾದಿಸುವ ಬದಲು ಮನೆಯ ಮಕ್ಕಳನ್ನೇ ಆಸ್ತಿ ಮಾಡಿ ಎಂದು ತಾಲೋಕು ನೌಕರರ ಸಂಘದ ಅದ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ ಕರೆ ನೀಡಿದರು.

0

ಹಲಗೂರು:ಮನೆಯಲ್ಲಿ ಮಕ್ಕಳಿದ್ದರೆ ಅವರಿಗೆ ಮನೆ, ಜಮೀನು ಸಂಪಾದಿಸುವ ಬದಲು ಮನೆಯ ಮಕ್ಕಳನ್ನೇ ಆಸ್ತಿ ಮಾಡಿ ಎಂದು ತಾಲೋಕು ನೌಕರರ ಸಂಘದ ಅದ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ ಕರೆ ನೀಡಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ಸಮೀಪದ ವಳಗೆರೆದೊಡ್ಡಿ ಗ್ರಾಮದಲ್ಲಿ ಎರಡು ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪುನರಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗಳು ಜ್ಞಾನಿಗಳನ್ನು ಉತ್ಪಾದಿಸುವ ಕಾರ್ಖಾನೆಗಳಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೇ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಾಧ್ಯವಿದೆ. ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಖಾಸಗಿ ಶಾಲಾ ವ್ಯಾಮೋಹ ಕಡಿಮೆಯಾಗುತ್ತಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಟ್ಟದಲ್ಲಿ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ತಾಲೋಕು ಕ್ಷೇತ್ರ ಶಿಕ್ಷಣ ಅಧಿಕಾರಿ ಚಿಕ್ಕಸ್ವಾಮಿ ಮಾತನಾಡಿ ತಾಲೂಕಿನಲ್ಲಿ ಮೂವತ್ತು ಸರ್ಕಾರಿ ಶಾಲೆಗಳು ಮುಚ್ಚಿವೆ. ಹತ್ತು ಶಾಲೆಗಳು ಮುಚ್ಚುವ ಹಂತ ತಲುಪಿವೆ. ಪೋಷಕರ ಸಭೆ ನಡೆಸಿ ಮುಚ್ಚಿರುವ ಎಲ್ಲಾ ಶಾಲೆಗಳನ್ನು ಹಂತ ಹಂತವಾಗಿ ತೆರೆಯಲು ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ.ಎನ್.ಯೋಗೇಶ್, ಅಕ್ಷರ ದಾಸೋಹ ನಿರ್ದೇಶಕ ಜಯಪ್ರಕಾಶ್, ಸಮೂಹ ಸಂಪನ್ಮೂಲ ವ್ಯಕ್ತಿ ಜಿ.ಎಸ್.ಕೃಷ್ಣ, ಶಿಕ್ಷಕರಾದ ಎ.ಎಸ್.ದೇವರಾಜು, ರಾಜೇಶ್, ಸಿದ್ದರಾಜು, ಕಾಳರಾಜೇಗೌಡ, ಶಶಿಕುಮಾರ್ ಸೇರಿದಂತೆ ಹಲವರು ಇದ್ದರು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪೆನ್ ಮತ್ತು ನೋಟ್ ಪುಸ್ತಕ ವಿತರಿಸಿ ನಂತರ ಬಿಇಒ ಚಿಕ್ಕಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ವರದಿಗಾರ :::::- ಪ್ರತಾಪ್. ಎ.ಬಿ

LEAVE A REPLY

Please enter your comment!
Please enter your name here