ಮಹದಾಯಿ ವಿಚಾರ : ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಗೋವಾ!

0

ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಮಹದಾಯಿ ಐತೀರ್ಪು ಪ್ರಶ್ನಿಸಿ ಗೋವಾ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಹಂತದಲ್ಲಿರುವಾಗ ಕರ್ನಾಟಕ ಕಳಸಾ ಬಂಡೂರಿ ನಾಲೆಗಳ ಮೂಲಕ ಅಕ್ರಮವಾಗಿ ನೀರು ತಿರುಗಿಸಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿ ಗೋವಾ ಸಿಎಂ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಕರ್ನಾಟಕಕ್ಕೆ ಮಹದಾಯಿ ನ್ಯಾಯಾಧಿಕರಣದಿಂದ 13.42 ಟಿಎಂಸಿ ನೀರು ಹಂಚಿಕೆ ಮಾಡಿ ಐತೀರ್ಪು ನೀಡಿತ್ತು. ಇದೀಗ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ.

LEAVE A REPLY

Please enter your comment!
Please enter your name here