ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮಹಾಪೂರ. ಮಹಾಲಕ್ಷ್ಮೀ ಲೇಔಟ್: 31/08. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 43 ನಂದಿನಿ ಲೇಔಟ್ ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಹಾಗೂ ಕುಡಿಯುವ ನೀರಿನ ಪ್ಲಾಂಟ್ ಉದ್ಘಾಟನಾ ಸಮಾರಂಭ ನಡೆಯಿತು. ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವರಾದ ಶ್ರೀ ಡಿವಿ ಸದಾನಂದಗೌಡ ಆಗಮಿಸಿ ಉದ್ಘಾಟನೆ ಮಾಡಿದರು. ಸ್ಥಳೀಯ ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ಸಚಿವರಾದ ಶ್ರೀ ಕೆ ಗೋಪಾಲಯ್ಯ ರವರು ಅಧ್ಯಕ್ಷತೆ ವಹಿಸಿದ್ದರು. ನಂತರ ಮಾತನಾಡಿದ ಸದಾನಂದ ಗೌಡರು ಮಹಾಮಾರಿ ಕೋರೋಣ ರೋಗದ ಮಧ್ಯೆಯೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆಯುತ್ತಿವೆ. ಅದಕ್ಕೆ ನಿದರ್ಶನ ಎಂಬಂತೆ ಇಂದು ನಂದಿನಿ ಲೇಔಟ್ ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣ ವಾಗಿದ್ದು ಒಂದೇ ಸೂರಿನಡಿ ಎಲ್ಲ ಕಛೇರಿ ಒಳಗೊಂಡ ಈ ಕಟ್ಟಡ ಸಾರ್ವಜನಿಕರಿಗೆ ಇಂದು ಲೋಕಾರ್ಪಣೆ ಮಾಡಿದ್ದು ತುಂಬಾ ಖುಷಿಯಾಯ್ತು,ಹಾಗೆಯೇ ಆಹಾರ ಸಚಿವರಾದ ಕೆ ಗೋಪಾಲಯ್ಯ ಅವರು ಮತ್ತು ಪಾಲಿಕೆ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್ ಅವರು ಮಾಡುತ್ತಿರುವ ಎಲ್ಲಾ ಜನಮುಖಿ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಆಹಾರ ಸಚಿವರಾದ ಕೆ ಗೋಪಾಲಯ್ಯ ಅವರು ನಮ್ಮ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ಗಳಲ್ಲಿಯೂ ಇದೇ ರೀತಿ ಜನರಿಗೆ ಒಂದೇ ಕಡೆ ಎಲ್ಲ ಸೌಲಭ್ಯ ದೊರಕಲು ಶ್ರಮಿಸುತ್ತಿದ್ದು, ನಂದಿನಿ ಬಡಾವಣೆಯಲ್ಲಿ ಮುಂದಿನ ದಿನಗಳಲ್ಲಿ ಈಜು ಕೊಳ ನಿರ್ಮಾಣ ಸೇರಿದಂತೆ ಬಾಕಿ ಇರುವ ಎಲ್ಲ ಕೆಲಸಗಳನ್ನ ಶೀಘ್ರದಲ್ಲಿ ಮಾಡಿ ಮುಗಿಸಲಾಗುವುದು.ಕ್ಷೇತ್ರದ ಜನರಲ್ಲಿ ಮಾತು ನೀಡಿದಂತೆ ಎಲ್ಲ ಜನೌಪಯೋಗಿ ಕೆಲಸ ಮಾಡಲು ಕಟಿಬದ್ದನಾಗಿದ್ದೇನೆ ಎಂದರು. ಪಾಲಿಕೆ ಸದಸ್ಯರಾದ ರಾಜೇಂದ್ರ ಕುಮಾರ್ ಮಾತನಾಡಿ ನಮ್ಮ ಅಧಿಕಾರಾವಧಿಯಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು,ಹಾಗೂ ಆಹಾರ ಸಚಿವರಾದ ಕೆ ಗೋಪಾಲಯ್ಯ ನಾವರು ಪ್ರೋತ್ಸಾಹ ನಿರಂತರ ವಾಗೀ ನೀಡಿದ್ದಕ್ಕಾಗಿ ಇಂದು ಈ ವಾಣಿಜ್ಯ ಸಂಕೀರ್ಣ ತಲೆ ಎತ್ತಿ ನಿಂತಿದೆ ಎಂದರು. ಈ ಸಂದರ್ಭದಲ್ಲಿ ಮಹಾಲಕ್ಷ್ಮಿಲೇಔಟ್ ಬಿಜೆಪಿ ಮಂಡಲ ಅಧ್ಯಕ್ಷ ರಾದ ರಾಘವೇಂದ್ರ ಶೆಟ್ಟಿ ಮಾಜಿ ಶಾಸಕ ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್ ಹರೀಶ್, ಪಾಲಿಕೆ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್, ಮಹದೇವ ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಎನ್ ಜಯರಾಮ್ ಸೇರಿದಂತೆ ಹಲವು ಮುಖಂಡರು ಬಿಬಿಎಂಪಿ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.