ಮಾಜಿ ಕೇಂದ್ರ ಸಚಿವ ಜಸ್ವಂತ್​​ ಸಿಂಗ್​ ನಿಧನ!

0

Jaswant Singh: ಮಾಜಿ ಕೇಂದ್ರ ಸಚಿವ ಜಸ್ವಂತ್​​ ಸಿಂಗ್​ ನಿಧನ!
ರಾಜಕೀಯಕ್ಕೆ ಬರುವುದಕ್ಕೂ ಮೊದಲು ಜಸ್ವಂತ್​​ ಸಿಂಗ್​ ಭಾರತೀಯ ಸೇನೆಯಲ್ಲಿ ಮೇಜರ್​ ಆಗಿ ಸೇವೆ ಸಲ್ಲಿಸಿದ್ದರು. 1965ರಲ್ಲಿ ಭಾರತ-ಪಾಕ್​ ಯುದ್ಧದಲ್ಲಿ ಇವರು ಹೋರಾಡಿದ್ದರು. ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಬಿಜೆಪಿ ನಾಯಕ ಜಸ್ವಂತ್​​ ಸಿಂಗ್​ ಅವರು ಇಂದು (ಭಾನುವಾರ) ನಿಧನ ಹೊಂದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಇಂದೇ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಅವರ ಸಾವಿಗೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ ತಿಂಗಳಲ್ಲಿ ಸೇನಾ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. #🙏ಮಾಜಿ ಕೇಂದ್ರ ಸಚಿವ ನಿಧನ😢

LEAVE A REPLY

Please enter your comment!
Please enter your name here