ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ.

0

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ನಿನ್ನೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ನಿನ್ನೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here