ಮಾಜಿ ಸಚಿವ ಎಚ್‌ಡಿ ರೇವಣ್ಣಗೆ ಕೊರೊನಾ ಸೋಂಕು ದೃಢ

0

: ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಸಚಿವರು, ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ.

ಇದೀಗ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರೇವಣ್ಣ ಅವರ ಬೆಂಗಾವಲು ಪಡೆಯ 9 ಮಂದಿ ಪೊಲೀಸರಿಗೆ ಕೊರೊನಾ ಪರೀಕ್ಷೆಯನ್ನು ಎರಡು ತಿಂಗಳ ಹಿಂದೆ ಮಾಡಲಾಗಿತ್ತು. ಬಳಿಕ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ವರದಿ ಬಂದಿತ್ತು.

ಇದೀಗ ಕೊರೊನಾ ದೃಢಪಟ್ಟ ಹಿನ್ನೆಲೆ ರೇವಣ್ಣ ಅವರು ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತ್ತೀಚೆಗೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆ ಚಿಕಿತ್ಸೆ ಪಡೆದು ನಂತರ ಗುಣಮುಖರಾಗಿ ಕೆಲಸಕ್ಕೆ ಹಾಜರಾಗಿದ್ದರು.

ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಸಚಿವ ಕೆ ಸುಧಾಕರ್‌, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಸೇರಿ ಅನೇಕರಿಗೆ ಕೊರೊನಾ ಸೋಂಕು ತಗುಲಿತ್ತು.

ರೇವಣ್ಣ ಅವರು ಬೇಗ ಗುಣಮುಖರಾಗುವಂತೆ ರಾಜಕೀಯ ಮುಖಂಡರು ಹಾಗೂ ಅವರ ಅಭಿಮಾನಿಗಳು ಹಾರೈಸಿದ್ದಾರೆ. ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೂ ಕೂಡ ಕೊರೊನಾ ಟೆಸ್ಟ್‌ ನಡೆಸಲಾಗಿತ್ತು ಆಗ ಪಾಸಿಟಿವ್‌ ಎಂಬ ವರದಿ ಬಂದಿದೆ. ರಾಜ್ಯದ ಪ್ರಮುಖ ನಾಯಕರಿಗೆ ಕೊರೊನಾ ಸೋಂಕು ಹರಡುತ್ತಿದೆ. ಈ ಪೈಕಿ ಕೆಲವರು ಗುಣಮುಖರಾಗಿದ್ದರೆ ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here