ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಆರು ತಿಂಗಳ ಅವಧಿಯಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ, ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಕೇಳಿದ್ದಾರೆ. ಸುಮಾರು 3 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂದು ಅವರು ಸೂಚಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಈ ಸಂಬಂಧ, ಮುಖ್ಯಮಂತ್ರಿ ಅವರು ಎಲ್ಲಾ ಆಯೋಗ ಮತ್ತು ನೇಮಕಾತಿ ಮಂಡಳಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ. ಈವರೆಗೆ ರಾಜ್ಯ ಪೊಲೀಸ್ ಇಲಾಖೆಗೆ 1.37 ಲಕ್ಷ, 50 ಸಾವಿರ ಶಿಕ್ಷಕರು ಮತ್ತು ಇತರ ಇಲಾಖೆಗಳಲ್ಲಿ ಒಂದು ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.