ರಾಜ್ಯದಲ್ಲಿ ಕರೊನಾ ಸಕ್ರಿಯ ಪ್ರಕರಣಗಳು 83,551; ಇಂದು 4996 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​

0

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5,938 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 68 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 2,77,814ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಪ್ರಾಣಕಳೆದುಕೊಂಡವರು 4683 ಸೋಂಕಿತರು.

ಹಾಗೆ ಒಂದೇ ದಿನದಲ್ಲಿ 4,996 ಮಂದಿ ಕರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದಿನವರೆಗೆ ಒಟ್ಟು 1,89,564 ಜನರು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದು, ಸಕ್ರಿಯ ಪ್ರಕರಣಗಳು 83,551 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

LEAVE A REPLY

Please enter your comment!
Please enter your name here