ರಾಜ್ಯದಲ್ಲಿ ಕೊರೋನಾ ಹೆಚ್ಚಾಗಲು ಸರ್ಕಾರದ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯ

0

ಕೊರೋನಾ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಭ್ರಷ್ಟಾಚಾರವೇ ಕಾರಣವೇ ಹೊರತು ಜನರಲ್ಲ. ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೊರೋನಾ ಸೋಂಕಿನಲ್ಲಿ ಭಾರತ ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ. ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೋನಾಕ್ಕಿಂತಲೂ ಅಪಾಯಕಾರಿ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಕೊರೋನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೋನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ 10,000 ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಪ್ರತಿದಿನ ಸರಾಸರಿ 100 ಸಾವುಗಳಾಗುತ್ತಿವೆ. ಇಲ್ಲಿಯವರೆಗೆ 6.68 ಲಕ್ಷ ಜನರಿಗೆ ಕೊರೋನಾ ಸೋಂಕು ತಗಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೆಲ್ಲವನ್ನು ಕಂಡು ಕಾಣದಂತಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಕೊರೋನಾ ಸೋಂಕು ಬಡಿದಂತಿದೆ ಎಂದು ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here