ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಿಸಲು ಗುರುವಾರ ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗವನ್ನು ಕರೆದುಕೊಂಡು ಹೋಗಿ ಉಪಮುಖ್ಯಮಂತ್ರಿಗಳೂ ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು

0

ಹಗರಿಬೊಮ್ಮನಹಳ್ಳಿ: ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಿಸಲು ಗುರುವಾರ ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗವನ್ನು ಕರೆದುಕೊಂಡು ಹೋಗಿ ಉಪಮುಖ್ಯಮಂತ್ರಿಗಳೂ ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ.ನೇಮಿರಾಜ್ ನಾಯ್ಕ್ ಅವರು ಹೇಳಿದರು. ಅವರು ಮಂಗಳವಾರ ತಮ್ಮ ನಿವಾಸದಲ್ಲಿ ಕ್ಷೇತ್ರದ ಪ್ರಥಮದರ್ಜೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಯಪನ್ಯಾಸಕರು ಕರೋನಾ ಕಾರಣದಿಂದ ಕಾಲೇಜುಗಳು ನಡೆಯದೇ ಇರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಅಹಾರ ಕಿಟ್ ವಿತರಣೆ ಮಾಡಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.
ಬಳ್ಳಾರಿ ಜಿಲ್ಲೆಯಲ್ಲಿನ ಸ.ಪದವಿಪೂರ್ವ ಕಾಲೇಜು ಹಾಗೂ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು ಐದುನೂರಕ್ಕೂ ಹೆಚ್ಚು ಉಪನ್ಯಾಸಕರು ಸೇವೆಸಲ್ಲಿಸುತ್ತಿದ್ದಾರೆ. ಅವರಿಗೆ ಬಳ್ಳಾರಿ ಖನಿಜ ನಿಧಿಯಿಂದ ಆರ್ಥಿಕ ಸಹಾಯ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಅಪಾರ ಶಿಕ್ಷಣ ಕಾಳಜಿಯುಳ್ಳ ಶ್ರೀ ಆನಂದ್ ಸಿಂಗ್ ಅವರ ಜೊತೆ ಮಾತಾಡಿ ಮನವರಿಕೆಮಾಡಿ ಕೊಡಲಾಗುವುದು. ಮಾನ್ಯ ಆನಂದ್ ಸಿಂಗ್ ಅವರು ಕಷ್ಟದಲ್ಲಿರುವ ಉಪನ್ಯಾಸಕರಿಗೆ ಖಂಡಿತ ಸಹಾಯ ಮಾಡುತ್ತಾರೆ ಎಂಬ ಭರವಸೆ ನನಗಿದೆ ಎಂದರು.

(ಕೆ.ನೇಮಿರಾಜ್ ನಾಯ್ಕ ಅವರ ಬೈಟ್)

ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರವ್ಯಾಪ್ತಿಯ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here