ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

0

ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆ.ಎಚ್ ದೇವೆಗೌಡ ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

87 ವರ್ಷ ವಯಸ್ಸಿನ ಹೆಚ್.ಡಿ ದೇವೆಗೌಡ ಜೂನ್ ನಲ್ಲಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1996ರ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕರೊಬ್ಬರು ಮೇಲ್ಮನೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಸಭೆಯ ಸಭಾಧ್ಯಕ್ಷರೂ, ಹಾಗೂ ಉಪರಾಷ್ಟ್ರತಿಯಾಗಿರುವ ವೆಂಕಯ್ಯ ನಾಯ್ಡು ಅವರು ದೇವೆಗೌಡ ಸೇರಿದಂತೆ ರಾಜ್ಯಸಭೆಗೆ ಆಯ್ಕೆಯಾಗಿರುವ ಇತರರಿಗೆ ಪ್ರಮಾಣ ವಚನ ಭೋಧಿಸಿದರು.

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ದೇವೆಗೌಡರು, ಬಳಿಕ ವೆಂಕಯ್ಯ ನಾಯ್ಡು ಅವರಿಗೆ ನಮಸ್ಕರಿಸಿದ್ದಾರೆ. ನಂತರ ಮಾತನಾಡಿದ ವೆಂಕಯ್ಯ ನಾಯ್ಡು ಮೇಲ್ಮನೆಗೆ ಉತ್ತಮ ವ್ಯಕ್ತಿಯ ಸೇರ್ಪಡೆಯಾಗಿದೆ. ಮಾಜಿ ಪ್ರಧಾನಿ ಹಾಗೂ ನಮ್ಮ ದೇಶದ ಹಿರಿಯ ನಾಯಕರೊಬ್ಬರು ಸದನಕ್ಕೆ ಬಂದಿದ್ದಾರೆಂದು ದೇವೆಗೌಡರನ್ನು ಪರಿಚಯಿಸಿದರು.

LEAVE A REPLY

Please enter your comment!
Please enter your name here