ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್​ ಅವರಿಗೆ ಕೊವಿಡ್​-19 ಸೋಂಕು

0

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್​ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.
ಆಗಸ್ಟ್​ 5ರಂದು ಅಯೋಧ್ಯೆಯಲ್ಲಿ ನಡೆದ ಭೂಮಿ ಪೂಜೆಯಲ್ಲಿ ಮಹಾಂತ ನೃತ್ಯ ಗೋಪಾಲದಾಸ್​ ಅವರೂ ಭಾಗವಹಿಸಿದ್ದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಟ್ರಸ್ಟ್​ ಅಧ್ಯಕ್ಷರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.

ಹಾಗೇ ಮಹಾಂತ ಜೀ ಅವರಿಗೆ ಆಸ್ಪತ್ರೆಯಲ್ಲಿ ಕೂಡಲೇ ಚಿಕಿತ್ಸೆ ನೀಡಬೇಕು. ಅವರಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನೂ ಶೀಘ್ರವೇ ಮಾಡಬೇಕು ಎಂದು ಸಿಎಂ, ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಮಹಾಂತ ನೃತ್ಯ ಗೋಪಾಲದಾಸ್​ ಜೀ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ಮೇದಾಂತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ಮಥುರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಆಗಸ್ಟ್​ 5ರಂದು ಅಂದರೆ ಎಂಟು ದಿನಗಳ ಹಿಂದೆ ಮಹಾಂತ ನೃತ್ಯ ಗೋಪಾಲದಾಸ್​ ಅವರು ಅಯೋಧ್ಯೆ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಸೇರಿ ಪ್ರಮುಖರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಪೂಜೆಯಲ್ಲೂ ಪಾಲ್ಗೊಂಡಿದ್ದರು. ಆದಷ್ಟು ಶೀಘ್ರವೇ ರಾಮಮಂದಿರ ನಿರ್ಮಾಣವಾಗಬೇಕು ಎಂದು ಅಂದು ಮಾತನಾಡಿದ್ದರು.

LEAVE A REPLY

Please enter your comment!
Please enter your name here