ರಾಮನಗರ: ಜಿಲ್ಲೆಯಲ್ಲಿಂದು 116 ಕೊರೋನಾ ಪ್ರಕರಣ ದೃಢ : ಒಂದು ಸಾವು

0

ಜಿಲ್ಲೆಯಲ್ಲಿ ಚನ್ನಪಟ್ಟಣ 42, ಕನಕಪುರ 32, ಮಾಗಡಿ 7 ಮತ್ತು ರಾಮನಗರ 35 ಪ್ರಕರಣಗಳು ಸೇರಿ ಇಂದು ಒಟ್ಟು 116 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಒಟ್ಟು ಪ್ರಕರಣ:ಇದುವರೆಗೆ ಜಿಲ್ಲೆಯಲ್ಲಿ 2496 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 584, ಕನಕಪುರ 512, ಮಾಗಡಿ 388 ಮತ್ತು ರಾಮನಗರ 1012 ಪ್ರಕರಣಗಳು ಸೇರಿವೆ.

ಸಾವು: ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 64 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 6, ಕನಕಪುರ ತಾಲ್ಲೂಕಿನಲ್ಲಿ 6, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 28 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 3, ಕನಕಪುರ ತಾಲ್ಲೂಕಿನಲ್ಲಿ 5 ಹಾಗೂ ರಾಮನಗರ ತಾಲ್ಲೂಕಿನಲ್ಲಿ 7 ಜನ ಸೇರಿ ಒಟ್ಟಾರೆ 15 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1665 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 381, ಕನಕಪುರ 340, ಮಾಗಡಿ 284 ಮತ್ತು ರಾಮನಗರ 660 ಜನರು ಸೇರಿದ್ದಾರೆ.

ಸಕ್ರಿಯ ಪ್ರಕರಣ:ಜಿಲ್ಲೆಯಲ್ಲಿ ದಾಖಲಾಗಿರುವ 2496 ಪ್ರಕರಣಗಳ ಪೈಕಿ 1665 ಜನರು ಗುಣಮುಖರಾಗಿದ್ದಾರೆ, ಇನ್ನೂ 803 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 803 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 197, ಕನಕಪುರ 166, ಮಾಗಡಿ 95 ಮತ್ತು ರಾಮನಗರ 345 ಪ್ರಕರಣಗಳು ಸೇರಿವೆ.

ಜಿಲ್ಲಾ ಆರೋಗ್ಯ ಇಲಾಖೆ ವರದಿ:ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರ (ಆ. 19) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 23613 (ಹೊಸದಾಗಿ ಇಂದಿನ 705 ಸೇರಿ). ಒಟ್ಟು 12432 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 700 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 6761ಗೆ ಏರಿಕೆಯಾಗಿದೆ.

ಜ್ವರ ತಪಾಸಣೆ:ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 61 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 4715 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.

ಕ್ವಾರಂಟೈನ್ ಒಟ್ಟು 5 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

ಮಾದರಿ ಸಂಗ್ರಹ:ಇಂದು ಹೊಸದಾಗಿ 705 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 23872 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 20431 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 335 ಬಾಕಿ ವರದಿ ಸೇರಿ ಒಟ್ಟು 917 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here