ರಾಷ್ಟ್ರೀಯ ಬಸವ ದಳದ ಗೌರವಾಧ್ಯಕ್ಷ ಆನಂದ ಚೋಪ್ರಾ ನಿಧನ

0

ಇಲ್ಲಿನ ನಿವಾಸಿ, ರಾಷ್ಟ್ರೀಯ ಬಸವ ದಳದ ಗೌರವಾಧ್ಯಕ್ಷ ಆನಂದ ಚೋಪ್ರಾ (53) ಶನಿವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಆನಂದ ಯೂತ್ಸ್, ಎನ್‌ಕರೇಜ್ ಸಮೂಹ ಹಾಗೂ ಚೋಪ್ರಾ ಅಭಿಮಾನಿ ಬಳಗಗಳ ಮೂಲಕ ಹಲವು ಸಾಮಾಜಿಕ ಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದ ಅವರು, ಸವದತ್ತಿ-ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸತತ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಎಪಿಎಂಸಿ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸ್ನೇಹಿತನ ಪಾರ್ಥಿವ ಶರೀರದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕಣ್ಣೀರಿಟ್ಟರು. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೈಲೂರ ನಿಜಗುಣಾನಂದ ಸ್ವಾಮೀಜಿ, ರಾಜಕೀಯ ಮುಖಂಡರು ಹಾಗೂ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದರು.

ಸಂಜೆ ಕಲ್ಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

LEAVE A REPLY

Please enter your comment!
Please enter your name here