ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ : ಕೋ-ಆರ್ಡಿನೇಟರ್ ನೇಮಕ

0

ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ರಾಷ್ಟ್ರೀಯ ಕೋ-ಆರ್ಡಿನೇಟರ್ ಆಗಿ ಮಂಗಳೂರಿನ ಶೇರಿಲ್ ಆಯೋನ ಅವರನ್ನು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಐಶ್ವರ್ಯ ಮಹಾದೇವ್ ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ.

ಶೇರಿಲ್ ಆಯೋನರು ಈ ಹಿಂದೆ ರಾಜ್ಯ ಮಹಿಳಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ರ ಸಾಮಾಜಿಕ ಜಾಲತಾಣದ ರಾಜ್ಯ ತಂಡದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಯು.ಟಿ. ಖಾದರ್, ಕೆ. ಅಭಯಚಂದ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಝೀರ್ ಬಜಾಲ್ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here