ಲಕ್ಷಾಂತರ ರೂ. ಲಂಚ ಪಡೆದ ಮೂವರು ಅಧಿಕಾರಿಗಳು ಸಸ್ಪೆಂಡ್

0

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮಂಜುಳಾ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here