ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಾಹನ ತೆರಿಗೆ ಇಳಿಕೆ

0

ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದದ ವಾಹನಗಳಿಗೆ, ಪ್ರತಿ ಆಸನಕ್ಕೆ ನಿಗಧಿ ಪಡಿಸಲಾಗಿದ್ದಂತ ರೂ.900 ಮೋಟಾರು ವಾಹಸ ತೆರಿಗೆಯನ್ನು ಇಳಿಕೆ ಮಾಡಿದೆ. ರೂ.900ರಿಂದ ರೂ.700ಕ್ಕೆ ಇಳಿಕೆ ಮಾಡಿ ಆದೇಶಿಸಿಲಾಗಿದೆ. ಈ ಮೂಲಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸವದಿ ಅವರು ತಿಳಿಸಿದ್ದಾರೆ. ಈ ಮೂಲಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡಿದೆ.

LEAVE A REPLY

Please enter your comment!
Please enter your name here