ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ, ಬಂದರುಗಳ ಕಾಮಗಾರಿ ವಿಷಯವಾಗಿ ಚರ್ಚಿಸಲಾಯಿತು

0

ಮೀನುಗಾರಿಕೆ ಇಲಾಖೆ, ಮುಜರಾಯಿ ಇಲಾಖೆ ಮತ್ತು ಒಳನಾಡು ಬಂದರು ಮತ್ತು ಜಲಸಾರಿಗೆ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಉತ್ತರಕನ್ನಡ ಜಿಲ್ಲೆಯ‌ ಶಾಸಕರೊಂದಿಗೆ ಕರಾವಳಿ ಪ್ರದೇಶದ ಅಭಿವೃದ್ಧಿ ಕುರಿತು ಇಂದು ಸಭೆ ನಡೆಯಿತು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ, ಬಂದರುಗಳ ಕಾಮಗಾರಿ ಹಾಗೂ ಕಡಲ ಕೊರೆತ ಪ್ರದೇಶಗಳ ವಿಷಯವಾಗಿ ಚರ್ಚಿಸಲಾಯಿತು. ಅಲ್ಲದೇ, ಮೀನುಗಾರರ ಏಳಿಗೆ, ಬಂದರು ಅಭಿವೃದ್ಧಿಗೆ ಮತ್ತು ಕಡಲ ಕೊರೆತ ಪ್ರತಿಬಂಧಕ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಹೆಚ್ಚಿನ ಅನುದಾನ ನೀಡುವಂತೆ‌ ಮನವಿ ಮಾಡಲಾಯಿತು. ಅಲ್ಲದೇ, ಮಾಜಾಳಿ ಮತ್ತು ದೇವಬಾಗ ನಡುವೆ ಮೀನುಗಾರಿಕಾ ಬಂದರು ನಿರ್ಮಾಣದ ಕುರಿತು ಚರ್ಚಿಸಲಾಯಿತು.

ಕಡಲಿನಲ್ಲಿ ಲೈಟ್ ಫಿಶಿಂಗ್‌ ಸಂಪೂರ್ಣವಾಗಿ ನಿಷೇಧಿಸಿದ್ದು, ಅದನ್ನು ನಡೆಸುವವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಮೀನುಗಾರರ ಸಾಲಮನ್ನಾ, ಕೇಂದ್ರ ಸರ್ಕಾರದಿಂದ ಮೀನುಗಾರರಿಗೆ ಸಿಗಬೇಕಾದ ಸೌಲಭ್ಯಗಳು ಮತ್ತು ಅನುದಾನ, ಕಡಲ ತೀರದ ಅಭಿವೃದ್ಧಿ ಹಾಗೂ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ಶ್ರೀ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here