ಸ್ಥಳ: ಎಂಕೆ ಹುಬ್ಬಳ್ಳಿ
ಹೌದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಕಿತ್ತೂರು ವಿಧಾನ ಸಭಾ ಕ್ಷೇತ್ರದ ಆಯ್ದ 44 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಹಾಗೂ ಪ್ರದಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 29 ಕಿಲೋಮೀಟರ್ ಆಯ್ದ ರಸ್ತೆ ಕಾಮಗಾರಿಗಳಿಗೆ ಚಾಲನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಅನಂತ್ ಕುಮಾರ್ ಹೆಗ್ಡೆ ಮಾತನಾಡಿ ಕೊನೆಗೂ ಶಾಸಕ ಮಹಾಂತೇಶ್ ದೊಡ್ಡಗೌಡರು ಕೆರೆಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತೆಗೆದುಕೊಂಡು ಬಂದು ರೈತರಿಗೆ ನೇರವಾಗಿ ಆಧುನಿಕ ಭಗೀರಥ ಎನಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೊಡಿಸಲಾಗುವುದು ಎಂದು ಭರವಸೆ ಕೊಟ್ಟರು . ಶಾಸಕ ಮಹಾಂತೇಶ್ ದೊಡ್ಡಗೌಡರು ಮಾತನಾಡಿ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ನೀರಾವರಿ ಯೋಜನೆಗಳನ್ನು ತೆಗೆದುಕೊಂಡು ಬರಲಾಗವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಶ್ರೀಮತಿ ಆಶಾ ಐಹೊಳೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರು, ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀ ವಿರಕ್ತಯ್ಯ ಸಾಲಿಮಠ, ಚಿನ್ನಪ್ಪ ಮುತ್ನಾಳ್, ಉಳವಪ್ಪ ಉಳ್ಳೆ ಗಡ್ಡಿ ಹೀಗೆ ಹಲವಾರು ಮುಖಂಡರು, ನೀರಾವರಿ ಇಲಾಖೆ ಅಧಿಕಾರಿಗಳು , ಸಾರ್ವಜನಿಕರು ಉಪಸ್ಥಿತರಿದ್ದರು..
ಶ್ರೀ ಬಸವರಾಜು. ಪತ್ರಕರ್ತರು,