ಶೀಘ್ರದಲ್ಲಿಯೇ ದಸರಾ ಉನ್ನತ ಮಟ್ಟದ ಸಮಿತಿ ಸಭೆ : ಈ ಬಾರಿ ಸರಳ ದಸರಾ ಆಚರಣೆ – ಸಿಎಂ ಯಡಿಯೂರಪ್ಪ

0

 

ದಸರಾ ಉನ್ನತ ಮಟ್ಟದ ಸಮಿತಿ ಸಭೆಯನ್ನು ಶೀಘ್ರವೇ ಕರೆಯುವ ಬಗ್ಗೆ ದಿನಾಂಕ ನಿಗದಿ ಪಡಿಸಲಾಗುತ್ತದೆ. ಇಂತಹ ಸಭೆಯಲ್ಲಿ ಕೊರೋನಾ ಸಂಕಷ್ಟದಿಂದಾಗಿ ಸರಳವಾಗಿ ದರಸಾ ಹಬ್ಬ ಆಚರಣೆಯ ಬಗ್ಗೆ ರೂಪು ರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಬೇಕು ಎಂಬುದಾಗಿ ತೀರ್ಮಾನಿಸಿದ್ದೇವೆ. ಈ ಸಂಬಂಧ ದಸರಾ ಉನ್ನತ ಮಟ್ಟದ ಸಮಿತಿ ಸಭೆ ಶೀಘ್ರದಲ್ಲಿಯೇ ನಡೆಯಲಿದ್ದು, ಆ ಸಭೆಯಲ್ಲಿ ರೂಪುರೇಷೆಗಳನ್ನು ಚರ್ಚೆ ಮಾಡಲಿದ್ದೇವೆ ಎಂಬುದಾಗಿ ತಿಳಿಸಿದ್ರು.

LEAVE A REPLY

Please enter your comment!
Please enter your name here