ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೋಧ ಮತ್ತು ಇಬ್ಬರು ಬಾಲಕಿಯರು ಪೊಲೀಸ್ ವಶಕ್ಕೆ

0

ಇಬ್ಬರು ಬಾಲಕಿಯರನ್ನು ಕರೆದುಕೊಂಡು ದೆಹಲಿಗೆ ಹೊರಟಿದ್ದ ಯೋಧನನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸಂದೇಹಾಸ್ಪದ ನಡವಳಿಕೆ ಕಾರಣ ಅವರನ್ನು ತಡೆಯಲಾಗಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ವಶಕ್ಕೆ ಒಪ್ಪಿಸಲಾದ ರಾಷ್ಟ್ರೀಯ ರೈಫಲ್ಸ್​ನ ಯೋಧ ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ದೆಹಲಿಗೆ ಹೊರಟ ಉದ್ದೇಶವೇನು ಎಂಬುದು ಬಹಿರಂಗವಾಗಿಲ್ಲ. ಮೂವರನ್ನೂ ಈ ಬಗ್ಗೆ ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಈ ಬೆಳವಣಿಗೆಯನ್ನು ರಾಷ್ಟ್ರೀಯ ರೈಫಲ್ಸ್​ ಕೇಂದ್ರ ಕಚೇರಿ ಗಮನಕ್ಕೆ ತರುವ ಕೆಲಸ ಮಾಡಲಾಗಿದ್ದು, ಅಲ್ಲಿಂದ ಇನ್ನೂ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)

LEAVE A REPLY

Please enter your comment!
Please enter your name here