ಮಂಡ್ಯ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋಧಿಯವರು ಭೂಮಿಪೂಜೆ ಮಾಡಿ ಕಾಮಗಾರಿಯ ಆರಂಭಕ್ಕೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಪೌರಾಡಳಿತ, ರೇಷ್ಮೆ, ತೋvಟಗಾರಿಕೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಕೆ.ಆರ್.ಪೇಟೆ ಪಟ್ಟಣದ ಅಗ್ರಹಾರ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸಿದರು.
ಭಾರತ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋಧಿಯವರು ರಾಮಮಂದಿರದ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಭೂಮಿಪೂಜೆ ಮಾಡುವ ಮೂಲಕ ಕೊಟ್ಟಮಾತಿನಂತೆ ನಡೆಯುವ ಜೊತೆಗೆ ದೇಶದ ಬಹುಸಂಖ್ಯಾತ ಹಿಂಧೂ ಜನರ ಭಾವನೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ.
ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಸಚಿವ ನಾರಾಯಣಗೌಡ ಅಭಿಮಾನದಿಂದ ಹೇಳಿದರು.
ಕೆ.ಆರ್.ಪೇಟೆಯ ನಾಲ್ಕು ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಸಧ್ಯದಲ್ಲಿಯೇ ಭೂಮಿಪೂಜೆ.
ಮಂಡ್ಯ ತೆಂಡೇಕೆರೆ, ಅಕ್ಕಿಹೆಬ್ಬಾಳು, ಬೂಕನಕೆರೆ ಮತ್ತು ಸಂತೇಬಾಚಹಳ್ಳಿ ಗ್ರಾಮಗಳಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣಕ್ಕೆ ರಾಜ್ಯ ಸರ್ಕಾರವು ಮಂಜೂರಾತಿ ನೀಡಿದ್ದು ಸಧ್ಯದಲ್ಲಿಯೇ ಬಸ್ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ ಎಂದು ಜನರ ಚಪ್ಪಾಳೆಯ ನಡುವೆ ಸಚಿವ ನಾರಾಯಣಗೌಡ ಘೋಷಿಸಿದರು.
ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 35 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಡೆಯುತ್ತಿವೆ.
ಕೊರೋನಾ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳ ಅನುಷ್ಠಾನಕ್ಕೆ ತಡೆಯಾಗಿತ್ತು.
ಆದರೆ ನನ್ನನ್ನು ಸತತವಾಗಿ 3 ಅವಧಿಗೆ ಶಾಸಕನನ್ನಾಗಿ ಆಯ್ಕೆಮಾಡಿದ ಜನತೆಗೆ ಧನ್ಯವಾದಗಳನ್ನು ಸಮರ್ಪಿಸಲು ಗ್ರಾಮಭೇಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪ್ರತೀ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮಾಡುತ್ತಿದ್ದೇನೆ ಎಂದು ಸಚಿವ ಡಾ. ನಾರಾಯಣಗೌಡ ಅಭಿಮಾನದಿಂದ ಹೇಳಿದರು.
ಮಂಡ್ಯಕ್ಕೆ ಸುಣ್ಣ ಹಾಸನಕ್ಕೆ ಬೆಣ್ಣೆ.
ಮಂಡ್ಯ ಮತ್ತು ಹಾಸನ ನನಗೆ ಎರಡು ಕಣ್ಣುಗಳಿದ್ದಂತೆ ಎಂದು ಮೊಸಳೆ ಕಣ್ಣೀರು ಸುರಿಸುತ್ತಿದ್ದ ಜೆಡಿಎಸ್ ನಾಯಕರು ಮಂಡ್ಯದ ರೈತರಿಗೆ ಉಂಡೆನಾಮ ಹಾಕಿದ್ದಾರೆ.
ಹೊಳೆನರಸೀಪುರವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದರೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಭಿವೃದ್ಧಿಗೆ ಕಾಡಿ ಬೇಡಿದರೂ ಅನುದಾನ ನೀಡಲಿಲ್ಲ.
ಜಿಲ್ಲೆಯ ರೈತರ ಜೀವನಾಡಿಗಳಾದ ಮೈಷುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಗೊಳಿಸಿ ಪುನರಾರಂಭ ಮಾಡಿಸಲು ತಾಲ್ಲೂಕಿನ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರೇ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರಕ್ಕೆ ಬರಬೇಕಾಯಿತು.
ಎಂದು ಹೇಳಿದ ಸಚಿವ ನಾರಾಯಣಗೌಡ ಬಿಜೆಪಿ ಪಕ್ಷಕ್ಕೆ ಸೇರಿದ ನನಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡುವ ಜೊತೆಗೆ ಮೂರು ಪ್ರಮುಖ ಖಾತೆಗಳನ್ನು ನೀಡಿ ರಾಜ್ಯದಾದ್ಯಂತ ಜನತೆಯ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸ್ಮರಿಸಿದ ಸಚಿವರು ಕೃಷ್ಣರಾಜಪೇಟೆ ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಮಾದರಿ ತಾಲೂಕನ್ನಾಗಿ ಅಭಿವೃದ್ಧಿ ಮಾಡಿ ತೋರಿಸುವ ಮೂಲಕ ಒಬ್ಬ ಜನಪ್ರತಿನಿಧಿಯಾದವರು ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸಾಧಿಸಿ ತೋರಿಸುತ್ತೇನೆ ಎಂದು ನಾರಾಯಣಗೌಡ ಸವಾಲು ಹಾಕಿದರು.
ಕಾರ್ಯಕ್ರಮದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಮನ್ ಮುಲ್ ನಿರ್ದೇಶಕ ಕೆ.ಜಿ.ತಮ್ಮಣ್ಣ, ಮುಖಂಡರಾದ ಎ.ಜೆ.ದಿವಾಕರ್, ಟಿ.ಅಣ್ಣಯ್ಯ, ಆರ್.ವಾಸು, ಎಪಿಎಂಸಿ ನಿರ್ದೇಶಕ ತರಕಾರಿ ನಾಗಣ್ಣ, ರಾಮಕೃಷ್ಣೇಗೌಡ, ಎಂ.ಎಲ್.ನಾಗೇಂದ್ರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಉಪಾಧ್ಯಕ್ಷ ಕರ್ತೇನಹಳ್ಳಿ ಸುರೇಶ್, ತಾಲ್ಲೂಕು ರೈತಮೋರ್ಚಾ ಅಧ್ಯಕ್ಷ ಶಿವರಾಮೇಗೌಡ, ತಾಲ್ಲೂಕು ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಸಚಿವರ ಆಪ್ತಸಹಾಯಕಅವಧಿಗೆಾನಂದ, ಕಿಕ್ಕೇರಿ ಕುಮಾರ್, ರವಿ, ತಹಶೀಲ್ದಾರ್ ಎಂ.ಶಿವಮೂರ್ತಿ, ತಾ.ಪಂ ಇಓ ಚಂದ್ರಮೌಳಿ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ತೊಳಜನಾಯಕ್ ಮತ್ತಿತರರು ಉಪಸ್ಥಿತರಿದ್ದರು.