ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ ವರಿಷ್ಠರು, ಸಂಪುಟ ವಿಸ್ತರಣೆಗೆ ರೆಡ್ ಸಿಗ್ನಲ್

0

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ವರಿಷ್ಠರು ರೆಡ್ ಸಿಗ್ನಲ್ ಕೊಟ್ಟಿದ್ದು, ಅವೇಶನ ಆರಂಭದೊಳಗೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದೆ.

ಖಾಲಿ ಇರುವ 6 ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಅಲ್ಲದೆ ಅವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಿದರೆ ಶಾಸಕರು ಮುನಿಸಿಕೊಳ್ಳಬಹುದೆಂಬ ಕಾರಣಕ್ಕಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ಮಳೆಗಾಲದ ಅವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗುತಿತ್ತು. ಮಾಜಿ ಸಚಿವರಾದ ಉಮೇಶ್ ಕತ್ತಿ, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್‍ಗೆ ಮಾತ್ರ ಸಚಿವ ಸ್ಥಾನ ನೀಡಿ ಉಳಿದ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಲೆಕ್ಕಾಚಾರ ಮುಖ್ಯಮಂತ್ರಿ ಯಡಿಯೂರಪ್ಪನವರದ್ದಾಗಿತ್ತು.

ಆದರೆ ಇರುವ 6 ಸ್ಥಾನಗಳಿಗೆ ಎರಡು ಡಜನ್‍ಗೂ ಅಕ ಶಾಸಕರು ಆಕಾಂಕ್ಷಿಗಳಾಗಿರುವುದರಿಂದ ಯಾರಿಗೇ ಕೊಟ್ಟರೂ ಭಿನ್ನಮತಕ್ಕೆ ಅವಕಾಶ ನೀಡಿದಂತಾಗುತ್ತದೆ. ಅವೇಶನದಲ್ಲಿ ಪ್ರತಿಪಕ್ಷಗಳ ಮುಂದೆ ಮುಖಭಂಗವಾಗುತ್ತದೆ ಎಂಬ ಕಾರಣಕ್ಕಾಗಿ ಮುಂದೂಡಲಾಗಿದೆ.

ಮತ್ತೊಂದೆಡೆ ಖುದ್ದು ಯಡಿಯೂರಪ್ಪ ಕೂಡ ಸಂಪುಟ ವಿಸ್ತರಣೆಗೆ ತುದಿಗಾಲಲ್ಲಿ ನಿಂತಿದ್ದರು. ಸರ್ಕಾರ ಮತ್ತು ಪಕ್ಷದಲ್ಲಿ ಇನ್ನಷ್ಟು ಹಿಡಿತ ಸಾಸುವ ತವಕದಲ್ಲಿದ್ದರು.

ಆದರೆ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಖುದ್ದು ಗೊಂದಲದಲ್ಲಿರುವ ಬಿಜೆಪಿಯ ಹೈಕಮಾಂಡ್ ಆವಸರ ಸಲ್ಲ ಎಂಬ ಸಂದೇಶವನ್ನು ಬಿಎಸ್‍ವೈ ಅವರಿಗೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರ ಬೆಂಗಳೂರು ಭೇಟಿ ಬೆನ್ನಲ್ಲಿಯೇ ಈ ವರದಿಗಳು ಹರಿದಾಡುತ್ತಿವೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲು ಸೆಪ್ಟೆಂಬರ್ ಎರಡನೇ ವಾರದಲ್ಲಿ ದಿಲ್ಲಿಗೆ ಬರುವಂತೆ ಯಡಿಯೂರಪ್ಪನವರಿಗೆ ಸೂಚನೆ ನೀಡಲಾಗಿದೆ.

ಪಕ್ಷದ ದೀರ್ಘಕಾಲೀನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿಸ್ತರಣೆ ಅಥವಾ ಪುನಾರಚನೆ ಇಲ್ಲವೇ ನಾಯಕತ್ವ ಬದಲಾವಣೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ. ಆ ವಿಚಾರದಲ್ಲಿ ಆತುರದ ತೀರ್ಮಾನ ಬೇಡ ಎಂಬ ಸಂದೇಶವನ್ನು ಸಂತೋಷ್ ರವಾನಿಸಿದ್ದಾರೆ ಎನ್ನಲಾಗಿದೆ.

ಸದ್ಯ ವಿಧಾನಪರಿಷತ್ ಸೇರಿಕೊಂಡಿರುವ ಪಕ್ಷಾಂತರಿಗಳಿಗಾದರೂ ತಕ್ಷಣಕ್ಕೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಅವರ ಋಣಸಂದಾಯ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತುದಿಗಾಲ ಮೇಲೆ ನಿಂತಿರುವದಂತೂ ಸತ್ಯ.

ಈ ಮಧ್ಯೆ ಸಂತೋಷ್ ಬೆಂಗಳೂರು ಭೇಟಿ ಮತ್ತು ಕೆಲ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಂತರ ಅಕಾರದ ಕನಸು ಕಾಣುತ್ತಿದ್ದ ಸಚಿವಾಕಾಂಕ್ಷಿಗಳಲ್ಲಿ ಈ ಬೆಳವಣಿಗೆ ಸಾಕಷ್ಟು ನಿರಾಸೆ ಮೂಡಿಸಿದೆ ಎಂದು ಮೂಲಗಳು ಹೇಳಿವೆ.

ಒಟ್ಟಿನಲ್ಲಿ ಕಳೆದ ವರ್ಷ ಅಕಾರಕ್ಕೆ ಬಂದ ದಿನದಿಂದಲೂ ತಮಗೆ ಬೇಕಾದ ಸಂಪುಟ ರಚಿಸಿಕೊಳ್ಳುವ ವಿಷಯದಲ್ಲಿ ಯಡಿಯೂರಪ್ಪನವರಿಗೆ ಹೈಕಮಾಂಡ್ ಅಡ್ಡಿ ಒಡ್ಡುತ್ತಲೇ ಬಂದಿದೆ ಎಂಬ ಭಾವನೆಗೆ ಈ ಬೆಳವಣಿಗೆ ಮತ್ತಷ್ಟು ಪುಷ್ಟಿ ನೀಡಿದೆ.

LEAVE A REPLY

Please enter your comment!
Please enter your name here