ಸಮಾಜದಲ್ಲಿ ಮೇಲು-ಕೀಳು ಬಿಟ್ಟು ಒಂದೇ ಜಾತಿ, ಒಂದೇ ಮತ, ಒಂದೇ ದೈವ ಎಂಬ ಸಂದೇಶ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸಿಂದಗಿ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

0

ಸಿಂದಗಿ: ಸಮಾಜದಲ್ಲಿ ಮೇಲು-ಕೀಳು ಬಿಟ್ಟು ಒಂದೇ ಜಾತಿ, ಒಂದೇ ಮತ, ಒಂದೇ ದೈವ ಎಂಬ ಸಂದೇಶ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸಿಂದಗಿ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜನೆ ಮಾಡಿದ ಈ ಸರಳ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಸಂಜೀವಕುಮಾರ ದಾಸರ ಮಾತನಾಡಿ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಘೋಷಣೆಯ ಮೂಲಕ ಸಮಾಜದಲ್ಲಿ ಕ್ರಾಂತಿಗೆ ನಾಂದಿ ಹಾಡಿದವರು ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರು. ಜನರು ಶೋಷಣೆಗಳಿಂದ ಮುಕ್ತರಾಗಲು, ಜೀವನ ಸುಧಾರಿಸಲು ಸಂಘರ್ಷಕ್ಕಿಂತ ಭಿನ್ನವಾದ ಚಳುವಳಿಯನ್ನು ಮುನ್ನಡೆಸಿದರು. ಇಂತಹ ಮಹಾನ ವ್ಯಕ್ತಿಯ ಜಯಂತಿಯನ್ನು ಕೋವಿಡ-19 ಕರೋನಾ ವೈರಸ್ ಎಂಬ ಈ ಮಾಹಾಮಾರಿ ಕೋರೊನಾದಿಂದಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಣೆ ಮಾಡುವಂತೆ ಸಮಾಜದ ಮುಖಂಡರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಅವರು ಸ್ಪಂದಿಸಿದ್ದು ಅವರಿಗೆ ನಾನು ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದ ಹೇಳಿದರು.
ಇದೇ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು ಈಡಿಗ ಸಮಾಜದ ಅದ್ಯಕ್ಷ, ತಮ್ಮಣ್ಣ ಈಳಗೇರಿ, ಉದ್ಯಮಿ ಸಚಿನ ಈಳಗೇರ, ಬಸವರಾಜ ಬಾಗೇವಾಡಿ, ನರಸಯ್ಯ ಈಳಗೇರ, ಅರವಿಂದ ಈಳಗೇರ ಹಾಗೂ ಮಹೇಶ ಈಳಗೇರ ಸೇರಿದಂತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

ವರದಿ: ಮಹಾಂತೇಶ ನೂಲಾನವರ, ಸಿಂದಗಿ

LEAVE A REPLY

Please enter your comment!
Please enter your name here