ಸಿಇಟಿ ಪರೀಕ್ಷೆ ಬರೆಯುತ್ತಿರುವ 800 ವಿದ್ಯಾರ್ಥಿಗಳಿಗೆ ವಿತರಿಸಲು ರಾಜ್ಯದ ಪೌರಾಡಳಿತ, ರೇಷ್ಮೆ,ತೋಟಗಾರಿಕೆ ಹಾಗೂ

0

ಸಿಇಟಿ ಪರೀಕ್ಷೆ ಬರೆಯುತ್ತಿರುವ 800 ವಿದ್ಯಾರ್ಥಿಗಳಿಗೆ ವಿತರಿಸಲು ರಾಜ್ಯದ ಪೌರಾಡಳಿತ, ರೇಷ್ಮೆ,ತೋಟಗಾರಿಕೆ ಹಾಗೂ

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅಭಿಮಾನಿಗಳ ಬಳಗದ ವತಿಯಿಂದ ಸ್ಯಾನಿಟೈಸರ್, ಮಾಸ್ಕುಗಳು ಹಾಗೂ ಪೆನ್ನುಗಳ ವಿತರಣೆ.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಮಾಸ್ಕುಗಳು, ಸ್ಯಾನಿಟೈಸರ್ ಹಾಗೂ ಪೆನ್ನುಗಳನ್ನು ವಿತರಿಸಿದ ಅಭಿಮಾನಿ ಬಳಗದ ಸಂಚಾಲಕರಾದ ಪಿ.ಪ್ರವೀಣ್ ಹಾಗೂ ಸಂತೂ.

ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಎದುರಿಸಬೇಕು.

ಕೊರೋನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಅಲ್ಲದೇ ಮಾನ್ಯ ಸಚಿವರಾದ ಡಾ.ನಾರಾಯಣಗೌಡ ಅವರು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿ ಬೇಕಾದ ಮಾಸ್ಕುಗಳು, ಸ್ಯಾನಿಟೈಸರ್ ಹಾಗೂ ಪೆನ್ನುಗಳನ್ನು ನೀಡಿದ್ದಾರೆ.

ಆದ್ದರಿಂದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಸಾಧನೆ ಮಾಡಬೇಕು ಎಂದು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಾದ ಲಿಂಗಣ್ಣಸ್ವಾಮಿ ಮತ್ತು ಡಿ.ಬಿ.ಸತ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕಿರಣ್, ಚಂದ್ರಶೇಖರ್, ಶಶಿ ಮತ್ತು ಸುನಿಲ್, ಹೆಚ್.ಬಿ.ಮಂಜುನಾಥ್ ಉಪನ್ಯಾಸಕರಾದ ಸುರೇಶ್, ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here