ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಸೋಂಕು ತಗುಲಿದೆ ಎನ್ನಲಾಗುತ್ತಿದೆ.
ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರಿಗೂ ಮಾಜಿ ಸಿಎಂ ಸಿದ್ದರಾಮಯ್ಯ ನಂತ್ರ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಅವರ ಕುಟುಂಬದ ಮೂಲಕಗಳಿಂದ ಮಾಹಿತಿ ಲಭ್ಯವಾಗಿದ್ದು, ಶಾಸಕ ಡಾ.ಯತೀಂದ್ರ ಅವರಿಗೆ ಕೊರೋನಾ ಸೋಂಕು ತಗುಲಿದ್ಯಾ ಅಥವಾ ಇಲ್ಲವೋ ಎಂಬುದರ ಬಗ್ಗೆ ಮತ್ತಷ್ಟು ಖಚಿತ ಮಾಹಿತಿ ಲಭ್ಯವಾಗಬೇಕಿದೆ.