ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : CCBಯಿಂದ ನಟಿ ರಾಗಿಣಿ ಸೇರಿದಂತೆ 12 ಆರೋಪಿಗಳ ವಿರುದ್ಧ ಸುಮೋಟೋ ಕೇಸ್

0

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಸಂಬಂಧ ಇದೀಗ ಸಿಸಿಬಿಯಿಂದ ನಟಿ ರಾಗಿಣಿ ದ್ವಿವೇದಿ ಸೇರಿದಂತೆ 12 ಆರೋಪಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಈ ಮೂಲಕ ನಟಿ ರಾಗಿಣಿ ದ್ವಿವೇದಿಗೆ ಜೈಲು ಶಿಕ್ಷೆ ಮತ್ತಷ್ಟು ಬಿಗಿಯಾದಂತೆ ಆಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ಸೇರಿದಂತೆ 12 ಆರೋಪಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. NDPS ಕಾಯ್ದೆಯ ಅಡಿ ಪ್ರಕರಣ ದಾಖಲು.

ಅಂದಹಾಗೇ ಶಿವಪ್ರಸಾದ್ ಎ1 ಆರೋಪಿಯಾದರ ನಟಿ ರಾಗಿಣಿ ಆರೋಪಿ ನಂ.2 ಆರೋಪಿಯಾಗಿದ್ದಾರೆ. ವೀರೇಶ್ ಖನ್ನಾ ಎ3, ಪ್ರಶಾಂತ್ ರಾಂಕಾ ಎ4, ವೈಭವ್ ಜೈನ್ ಎ5, ಆದಿತ್ಯಾ ಆಳ್ವ ಎ6, ಲೂಮ್ ಪೆಪ್ಪರ್ ಎ7, ಪ್ರಶಾಂತ್ ರಿಜು ಎ8, ಅಶ್ವಿನ್ ಎ9, ಅಭಿಸ್ವಾಮಿ ಎ10, ರಾಹುಲ್ ಎ11 ಮತ್ತು ವಿನಯ್ ಎ12 ಆರೋಪಿಯಾಗಿದ್ದಾರೆ.

LEAVE A REPLY

Please enter your comment!
Please enter your name here