ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಕೇಸ್ : ಆರೋಪಿ ಆದಿತ್ಯ ಆಳ್ವಾಗೆ ಸಿಸಿಬಿಯಿಂದ ‘ಲುಕ್ ಔಟ್’ ನೋಟಿಸ್

0

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣದಲ್ಲಿ ಆದಿತ್ಯ ಆಳ್ವಾ ಗೆ ಸಿಸಿಬಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ನೀಡಿದ್ದಾರೆ.

ಹೌದು. ರಾಜ್ಯದಲ್ಲಿ ತಲ್ಲಣ ಮೂಡಿಸಿರುವ ಡ್ರಗ್ಸ್ ಪ್ರಕರಣದ 6 ನೇ ಆರೋಪಿ ಆದಿತ್ಯ ಆಳ್ವಾಗೆ ಸಿಸಿಬಿ ಲುಕ್ ಔಟ್ ನೋಟಿಸ್ ನೀಡಿದೆ. ಆರೋಪಿ ಆದಿತ್ಯ ಆಳ್ವ ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆ ನೋಟಿಸ್ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಹಿತಿ ನೀಡಿದ್ದಾರೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾ ರೆಸಾರ್ಟ್ ಮೇಲೆ ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಮಾದಕ ವಸ್ತು ಪತ್ತೆಯಾಗಿತ್ತು.

LEAVE A REPLY

Please enter your comment!
Please enter your name here