ಅಪ್ರಾಪ್ತ ಬಾಲಕಿಯಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ : ನೊಟೀಸ್

0

ನಗರದ ಸಿಬಿಟಿ ಹತ್ತಿರವಿರುವ ಸಾರ್ವಜನಿಕ ಶೌಚಾಲಯದಲ್ಲಿ ಭಾನುವಾರ ಅ.4 ರಂದು ಮಧ್ಯಹ್ನ 1 ಘಂಟೆ ಸುಮಾರಿಗೆ ಅಪ್ರಾಪ್ತ ಬಾಲಕಿಯರಿಂದ ಶೌಚಾಲಯವನ್ನು ಸ್ವಚ್ಚಗೊಳಿಸುವ ಕೆಲಸ ಮಾಡಿಸಿರುವ ಸುದ್ದಿಯು ವಿವಿಧ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವದನ್ನು ಗಮನಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿಸಿದವರಿಗೆ ನೋಟೀಸ್ ಜಾರಿಗೊಳಿಸಿದ್ದಾರೆ.ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ ಈ ಕೃತ್ಯವು ಅಪರಾಧವಾಗಿದ್ದು ಹಾಗೂ 1986 ರ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ( ನಿಷೇಧ & ನಿಯಂತ್ರಣ ) ತಿದ್ದುಪಡಿ ಕಾಯ್ದೆ 2016 ಅನ್ವಯ 2 ವರ್ಷ ಜೈಲು ಹಾಗೂ ರೂ .50,00೦೦ ವರೆಗೆ ದಂಡವಿರುತ್ತದೆ . ಈ ಕುರಿತು 06/10/2020 ರಂದು ಬೆಳಿಗ್ಗೆ 11-00 ಘಂಟೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿ ಇರುವ ಸ್ತ್ರೀ ಶಕ್ತಿ ಭವನದಲ್ಲಿ ನಡೆಯುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಿಚಾರಣೆ ಹಾಜರಾಗಲು ಶೌಚಾಲಯ ನಿರ್ವಹಣೆ ಗುತ್ತಿಗೆದಾರರಿಗೆ ಸೂಚಿಸಿದೆ .

LEAVE A REPLY

Please enter your comment!
Please enter your name here