ಈ ಬಾರಿಯ ಐಪಿಎಲ್‌ನಿಂದ ಹೊರನಡೆದ ಸುರೇಶ್‌ ರೈನಾ

0

ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್‌ ಸುರೇಶ್ ರೈನಾ ಅವರು ‌ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಹೊರನಡೆದಿದ್ದಾರೆ ಎಂದು ತಂಡ ಶನಿವಾರ ತಿಳಿಸಿದೆ.

33 ವರ್ಷದ ಆಟಗಾರ ರೈನ ಈ ತಿಂಗಳ ಆರಂಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರು.

‘ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಳಿಂದಾಗಿ ಭಾರತಕ್ಕೆ ಮರಳಿದ್ದಾರೆ. ಉಳಿದ ಐಪಿಎಲ್ ಋತುವಿನಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬದ ಸಂಪೂರ್ಣ ಬೆಂಬಲಕ್ಕೆ ನಿಲ್ಲುತ್ತದೆ,’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here