ಎನ್‍ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

0

ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರ ಉಪಟಳ ಹೆಚ್ಚಾಗುತ್ತಿದ್ದು, ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾಪಡೆಯ ಮೇಜರ್ ಮತ್ತು ಜಮ್ಮು-ಕಾಶ್ಮೀರದ ಇಬ್ಬರು ಪೊಲೀಸರು ಸೇರಿದಂತೆ ಕೆಲವು ಯೋಧರಿಗೆ ಗಾಯಗಳಾಗಿವೆ.

ಬಾರಾಮುಲ್ಲಾ ಜಿಲ್ಲೆಯ ಪಠಾಣ್ ಪ್ರದೇಶದ ಎಡಿಪೋರಾ ಎಂಬಲ್ಲಿ ಉಗ್ರಗಾಮಿಗರು ಅವಿತಿಟ್ಟುಕೊಂಡು ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗುತ್ತಿದ್ದಾರೆಂಬ ಖಚಿತ ವರ್ತಮಾನ ಭದ್ರತಾ ಪಡೆಗಳಿಗೆ ಲಭಿಸಿತ್ತು.

ಅದರಂತೆ ಯೋಧರು ಮತ್ತು ಪೊಲೀಸರು ಆ ಪ್ರದೇಶವನ್ನು ಸುತ್ತುವರಿದು ಉಗ್ರಗಾಮಿಗಳಿಗಾಗಿ ಶೋಧ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಆತಂಕವಾದಿಗಳು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು.

ಯೋಧರು ಪ್ರತಿದಾಳಿ ನಡೆಸಿದಾಗ ಕೆಲ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು. ನಂತರ ಮೂವರು ಭಯೋತ್ಪಾದಕರು ಹತರಾದರು. ಮೃತ ಉಗ್ರಗಾಮಿಗಳಿಂದ ಎಕೆ 47, ಎಕೆ 56 ರೈಫಲ್‍ಗಳು, ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎನ್‍ಕೌಂಟರ್‍ನಲ್ಲಿ ಗಾಯಗೊಂಡಿದ್ದ ಸೇನೆಯ ಮೇಜರ್ ಮತ್ತು ಇತರ ಯೋಧರನ್ನು ಬಾರಾಮುಲ್ಲಾದ 92 ಬೇಸ್‍ಕ್ಯಾಂಪ್‍ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂವರು ಉಗ್ರರ ಬಂಧನ: ಇದೇ ವೇಳೆ ಬಾರಾಮುಲ್ಲಾದ ಪಠಾಣ್ ಪ್ರದೇಶದಲ್ಲಿ ಮೂವರು ಉಗ್ರಗಾಮಿಜಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ವಿವಿಧ ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸು, ಶಸ್ತ್ರಾಸ್ತ್ರ ಮತ್ತಿತರ ಅಗತ್ಯ ಮಾಹಿತಿ ಒದಗಿಸುತ್ತಿದ್ದರು.

LEAVE A REPLY

Please enter your comment!
Please enter your name here