ಜನವಿರೋಧಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

0

ಬಂಗಾರಪೇಟೆ,ಅ.06-

ದಲಿತ ಯುವತಿ ಮನೀಷಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಂಧನ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಮೇಲೆ ನಡೆದ ಸಿ.ಬಿ.ಐ ದಾಳಿಗಳನ್ನು ವಿರೋಧಿಸಿ ಹಾಗೂ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ ಸರ್ಕಾರಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೆ.ಚಂದ್ರಾರೆಡ್ಡಿರವರ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿ, ಪ್ರಭಾರಿ ತಹಸೀಲ್ದಾರ್ ಮೂಲಕ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ
ದ್ವೇಷ ರಾಜಕಾರಣದ ಮೂಲಕ ಬಿ.ಜೆ.ಪಿ.ಪಕ್ಷವು ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ನಾಯಕರನ್ನು ಕಟ್ಟಿಹಾಕಲು ಸಾಧ್ಯವಿಲ್ಲವೆಂದು ಗುಡುಗಿದರು.

ಬಿ.ಜೆ.ಪಿ.ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲವಾಗಿದೆಯೆಂದು ದೂರಿದರಲ್ಲದೆ, ಅತ್ಯಾಚಾರಕ್ಕೆ ಒಳಗಾದ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರುಗಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಂಧನಕ್ಕೆ ಕಾರಣರಾದ ಯು.ಪಿ. ಸರ್ಕಾರದ ವರ್ತನೆಯನ್ನು ಖಂಡಿಸಿದರು.

ಮುಂಬರುವ ಉಪ ಚುನಾವಣೆಗಳಲ್ಲಿ ಸೋಲುವ ಭೀತಿಯಿಂದ ಕೆಂಗೆಟ್ಟಿರುವ ರಾಜ್ಯ ಸರ್ಕಾರ ಯಾವುದೇ ಆಧಾರಗಳಿಲ್ಲದಿದ್ದರೂ ವಿನಾಕಾರಣ ಇ.ಟಿ ಹಾಗೂ ಸಿ.ಬಿ.ಐ.ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಮನೆ ಮೇಲೆ ಮೇಲೆ ದಾಳಿ ನಡೆಸುತ್ತಿರುವುದನ್ನು ಟೀಕಿಸಿದರು.

ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ.ಸರ್ಕಾರಗಳು ಕೋವಿಡ್ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿರುವುದಲ್ಲದೆ ಕೋಟ್ಯಾಂತರ ರೂಪಾಯಿಗಳ ಲೂಟಿ ಮಾಡಿವೆಯೆಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಬಿ.ಜೆ.ಪಿ ಪಕ್ಷದ ಬೆದರಿಕೆಗಳಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ಹೆದುರುವುದಿಲ್ಲ, ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದ ಬಿ.ಜೆ.ಪಿ ಲೂಟಿಯಲ್ಲಿ ತೊಡಗಿದ್ದು, ಜನತೆಗೆ ಯಾವುದೇ ಅನುಕೂಲ ಮಾಡಿಕೊಡದೆ ಆರ್ಥಿಕವಾಗಿ ಜರ್ಜರಿತ ರಾಗಿದ್ದರೆಂದು ಟೀಕಿಸಿದ ಅವರು, ಬಿಜೆಪಿ ಪಕ್ಷ ಮುಂದಿನ ದಿನಗಳಲ್ಲಿ ಸೋಲು ಕಾಣುವುದು ನಿಶ್ಚಿತ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಹಾಗೂ ಗಿಕೆ ಶಿವಕುಮಾರ್ ಮುಖ್ಯಮಂತ್ರಿ ಗಳಾಗುವುದು ಖಚಿತವೆಂದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಪಾರ್ಥಸಾರಥಿ, ಯಲ್ಲಪ್ಪ, ಸಿ ಎಂ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here