ಪೊಲೀಸ್ ವಶದಲ್ಲಿದ್ದ ಯುವಕನ ಶವ ಠಾಣೆಯ ಬಾವಿಯಲ್ಲಿ ಪತ್ತೆ

0

ಪೊಲೀಸ್ ವಶದಲ್ಲಿದ್ದ ಯುವಕನೊಬ್ಬನ ಶವ ಠಾಣೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಲಾಕಪ್ ಡೆತ್ ಶಂಕೆ ವ್ಯಕ್ತವಾಗಿದೆ. ಮೃತ ಯುವಕನನ್ನು ಶ್ರೀಮಂತ ಗಾಯಕವಾಡ (25) ಎಂದು ಗುರುತಿಸಲಾಗಿದೆ.

ಕಾರ್ಮಿಕನಾಗಿ ಕೆಲಸ ಮಾಡುವ ಶ್ರೀಮಂತ, ಚಿಕ್ಕಪ್ಪನಿಗೊಂದಿಗೆ ಹೊಡೆದಾಟ ಘಟನೆ ಹಿನ್ನಲೆಯಲ್ಲಿ ಕಳೆದ ರಾತ್ರಿ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು. ರಾತ್ರಿ 11-45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಶೌಚಾಲಯಕ್ಕೆ ಹೋದಾಗ ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟ ನಡೆಸಿದಾಗ ಆತನ ಮೃತದೇಹ ಠಾಣೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here