ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ

0

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ಅವರನ್ನು ನೇಮಿಸಲಾಗಿದೆ.

ಪಾಲಿಕೆ ಸದಸ್ಯರ 5 ವರ್ಷದ ಅಧಿಕಾರ ಅವಧಿ ಇಂದಿಗೆ (ಸೆ.10) ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಗೌರವ್ ಗುಪ್ತ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.

ಗೌರವ್ ಗುಪ್ತ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಬಿಬಿಎಂಪಿಗೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಬಿಬಿಎಂಪಿಯ ಆಡಳಿತ ನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here