ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ.

0

ಕೋವಿಡ್-19: ದೇಶದಲ್ಲಿ ಒಂದೇ ದಿನ 96,424 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 52 ಲಕ್ಷ, 84,372 ಸಾವುದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ. ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಇನ್ನು ಒಂದೇ ದಿನ ಬರೋಬ್ಬರಿ 1,174 ಮಂದಿ ಸಾವನ್ನಪ್ಪಿದ್ದು, ಮಹಾಮಾರಿ ವೈರಸ್ ಈವರೆಗೂ 84,372 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ಈ ನಡುವೆ 52,14,678 ಮಂದಿ ಸೋಂಕಿತರ ಪೈಕಿ ಈವರೆಗೂ 41,12,552 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಭಾರತದಲ್ಲಿನ್ನೂ 10,17,754 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದೆ.

ಸೆಪ್ಟೆಂಬರ್ ಮೊದಲ 15 ದಿನದ ಅವಧಿಯಲ್ಲಿ ಕೊರೋನಾ ಕೇಸು ಹಾಗೂ ಸಾವಿನ ಪ್ರಕರಣಗಳಲ್ಲಿ ಭಾರತ, ವಿಶ್ವದಲ್ಲಿಯೇ ಮೊದಲ ಸ್ಥಾನ ಗಳಿಸಿದೆ.

ಸೆ.1ರಿಂದ 15ರ ಅವಧಿಯಲ್ಲಿ ಭಾರತದಲ್ಲಿ 13,08,991 ಕೊರೋನಾ ಪ್ರಕರಣಗಳು 16,307 ಸಾವು ವರದಿಯಾಗಿದೆ. ಅಮೆರಿಕಾದಲ್ಲಿ 5,57,657 ಕೇಸು 11,461 ಸಾವು ಹಾಗೂ ಬ್ರೆಜಿಲ್ ನಲ್ಲಿ 4,83,299 ಪ್ರಕರಣಗಳು ದೃಢಪಟ್ಟಿವೆ.

LEAVE A REPLY

Please enter your comment!
Please enter your name here