ಮೂರು ವರ್ಷಗಳಲ್ಲಿ 582 ಪಾಕ್​ ಉಗ್ರರ ಹತ್ಯೆ: ರಾಜ್ಯಸಭೆಗೆ ಮಾಹಿತಿ

0

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ನಾಯಕರೊಂದಿಗೆ ಬುಧವಾರ ಸಭೆ ನಡೆಸಿದರು. ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದೇವೆ.ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರೇ ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ ಎಂದರು.

ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ: ಶಿರಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರ ಅಣತಿಯಂತೆಬ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಭಿಪ್ರಾಯಕ್ಕೆ ನಾವೆಲ್ಲರೂ ಒಪ್ಪಿದ್ದೇವೆ. ನಮ್ಮ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇವೆ. ಶಿರಾ ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮ ಗುರಿ ಎಂದಿದ್ದಾರೆ.

LEAVE A REPLY

Please enter your comment!
Please enter your name here