ಮೆಟ್ರೋ ನಿಲ್ದಾಣ ಒಂದಕ್ಕೆ ವರನಟ ಡಾ.ರಾಜ್‌ಕುಮಾರ್‌ ಹೆಸರು ನಾಮಕರಣ..!

0

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡದ ವರನಟ, ಡಾ. ರಾಜ್‌ಕುಮಾರ್ ಹೆಸರು ಇಡಲು ಮುಂದಾಗಿದ್ದು, ಈ ಸಂಬಂಧ ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಅವರು ನಮ್ಮ ಮೆಟ್ರೋ ರೈಲು ನಿಗಮ ಲಿ, ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಹೌದು, ಬೆಂಗಳೂರಿನ ಮಾಗಡಿ ಮೆಟ್ರೋ ರೈಲು ನಿಲ್ದಾಣಕ್ಕೆ ಡಾ. ರಾಜ್‌ ಕುಮಾರ್ ಮೆಟ್ರೊ ಸ್ಟೇಷನ್‌ ಎಂದು ನಾಮಕರಣ ಮಾಡಬೇಕು ಎಂದು ರಾಜ್ಯ ಸರಕಾರಕ್ಕೂ ಪತ್ರ ಬರೆಯಲಾಗಿದ್ದು, ಇದಕ್ಕೆ ಒಪ್ಪಿಗೆ ಕೂಡ ಸಿಕ್ಕಿದೆ.

LEAVE A REPLY

Please enter your comment!
Please enter your name here