ರಾಜ್ಯದಲ್ಲಿ ಹೊಸದಾಗಿ 900 ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆ ತೆರಯಲು ಸರ್ಕಾರದಿಂದ ಅನುಮತಿ.!

0

ರಾಜ್ಯದಲ್ಲಿ ಈಗಾಗಲೇ 463 ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳಿವೆ. ಇದರ ಮಧ್ಯೆಯೂ ರಾಜ್ಯದಲ್ಲಿ ಹೊಸದಾಗಿ 900 ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿದ್ದು, ರಾಜ್ಯದಲ್ಲಿ ಹಾಲಿ ಇರುವ 463 ಎಂಎಸ್‌ಐಎಲ್ ಮಳಿಗೆಗಳನ್ನು ಜಿಲ್ಲಾ ವ್ಯಾಪ್ತಿಯಿಂದ ಒಂದು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ. ಒಂದು ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಮತ್ತೊಂದು ಗ್ರಾಮ ಪಂಚಾಯ್ತಿ ವ್ಯಾಪ್ತಿಗೂ ಸ್ಥಳಾಂತರಿಸಲು ಅವಕಾಶ ನೀಡಿದೆ.

ಅಂದಹಾಗೇ ರಾಜ್ಯದಲ್ಲಿ 900 ಹೊಸ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯುವ ಪ್ರಸ್ತಾವನೆ ಕಾಂಗ್ರೆಸ್ ಸರ್ಕಾರದ 2019ರ ಅವಧಿಯಲ್ಲಿಯೇ ತರಲಾಗಿತ್ತು. ಆದ್ರೇ ಸರ್ಕಾರದ ಇಂತಹ ನಿರ್ಧಾರಕ್ಕೆ ಜನರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರಿಂದ ಅಂದಿನ ಕಾಂಗ್ರೆಸ್ ಸರ್ಕಾರ ಕೈ ಬಿಟ್ಟಿತ್ತು. ಇದೀಗ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಕೊರೋನಾ ಸಂಕಷ್ಟದಿಂದಾಗಿ ಆರ್ಥಿಕ ನಷ್ಟ ಸರಿದೂಗಿಸಲು, ಬೊಕ್ಕಸಕ್ಕೆ ಹಣ ತುಂಬಿಸುವ ಸಲುವಾಗಿ ಮತ್ತೊಮ್ಮೆ 900 ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿ ಆದೇಶಿಸಿದೆ.

LEAVE A REPLY

Please enter your comment!
Please enter your name here