ಸರ್ಕಾರಿ ಉದ್ಯೋಗ ಬಯಸುವವರಿಗೆ ಬಂಪರ್:‌ ವಿವಿಧ ಇಲಾಖೆಗಳ ಹುದ್ದೆಗೆ ಅರ್ಜಿ ಅಹ್ವಾನ

0

ಸರ್ಕಾರಿ ನೌಕರಿ ಬಯಸುವವರಿಗೊಂದು ಖುಷಿ ಸುದ್ದಿಯಿದೆ. ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಬಿ ಕಾನ್‌ಸ್ಟೆಬಲ್ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ವಿವಿಧ ಇಲಾಖೆಗಳ ಒಟ್ಟು 1522 ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 27ರ ಮೊದಲು ಅರ್ಜಿ ಸಲ್ಲಿಸಬೇಕು.

ಸುಪ್ರೀಂ ಕೋರ್ಟ್ ಅರ್ಹ ಭಾರತೀಯ ನಾಗರಿಕರಿಂದ ಕಟ್ಟಡ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ 29 ರ ಒಳಗೆ ಕಳುಹಿಸಬಹುದು.

ಇನ್ನು ರೈಲ್ವೆ ಸಚಿವಾಲಯ ಟ್ವಿಟರ್ ಮೂಲಕ ರೈಲ್ವೆ ನೇಮಕಾತಿ ಪ್ರಕಟಣೆಯನ್ನು ನಿರಾಕರಿಸಿದೆ. 5000 ಖಾಲಿ ಹುದ್ದೆಗಳ ನೇಮಕಾತಿ ನಡೆಯಲಿದೆ ಎಂಬ ಸುದ್ದಿಯಿತ್ತು. ಅಂತಹ ಯಾವುದೇ ನೋಟಿಸ್ ನೀಡಿಲ್ಲ ಎಂದು ರೈಲ್ವೆ ಸಚಿವಾಲಯ ಹೇಳಿದೆ.

ಕ್ಯಾಬಿನೆಟ್ ಸೆಕ್ರೆಟರಿಯಟ್ , ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕೆ ಮುಂದಾಗಿದೆ. 12 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಶಾನ್ಯ ರಾಜ್ಯಗಳ ನಿವಾಸಿಗಳು ಅರ್ಜಿ ಸಲ್ಲಿಸಬಹುದು.

ಆಗ್ನೇಯ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕೋರಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 30 ರ ಮೊದಲು ಅರ್ಜಿ ಸಲ್ಲಿಸಬೇಕು. 432 ಹುದ್ದೆಗಳ ಭರ್ತಿ ನಡೆಯಲಿದೆ.

ರಾಷ್ಟ್ರೀಯ ವಸತಿ ಬ್ಯಾಂಕ್ ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎನ್‌ಎಚ್‌ಬಿ ತಜ್ಞ ಅಧಿಕಾರಿಗಳ ನೇಮಕಾತಿಗಾಗಿ ಆನ್‌ಲೈನ್ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಗಸ್ಟ್ 28 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಮೇಲ್ಕಂದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಉದ್ಯೋಗಾಕಾಂಕ್ಷಿಗಳು ಸಂಬಂಧಪಟ್ಟ ಇಲಾಖೆಯ ವೆಬ್‌ ಸೈಟ್‌ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

LEAVE A REPLY

Please enter your comment!
Please enter your name here