ಸಿ ಇ ಟಿ ರ್‍ಯಾಂಕಿಂಗ್ ಆಧಾರದ ಮೇಲೆ ರೈತರ ಮಕ್ಕಳಿಗೆ ಸೀಟು ಹಂಚಿಕೆ

0

ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ಪರೀಕ್ಷೆಯ ಬದಲಾಗಿ ಸಿಇಟಿ ರ್‍ಯಾಂಕಿಂಗ್

ಆಧಾರದ ಮೇಲೆ ಕೃಷಿಕರ ಮಕ್ಕಳು ಹಾಗೂ ಕೃಷಿ ಕಾರ್ಮಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು,ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ.ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಕೃಷಿಕರ ಕೋಟಾದ ಅಡಿಯಲ್ಲಿ 40% ಸೀಟುಗಳು ಕೃಷಿಕರ ಮಕ್ಕಳಿಗೇ ಮೀಸಲಿರುವುದರಿಂದ ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೊಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ‌.ಇದರಿಂದ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ಸಚಿವ ಬಿ ಸಿ ಪಾಟೀಲ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here