ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಸ್: ಮತ್ತಿಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

0

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 33ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿಗಳಾದ ನಟಿ ಸಂಜನಾ ಗಲ್ರಾಣಿ, ರವಿಶಂಕರ್, ವಿರೇನ್ ಖನ್ನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿರುವ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಈ ವೇಳೆ 33ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರು ರವಿಶಂಕರ್ ಹಾಗೂ ವಿರೇನ್ ಖನ್ನಾ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರವಿಶಂಕರ್ ಹಾಗೂ ವಿರೇನ್ ಖನ್ನಾ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ.

LEAVE A REPLY

Please enter your comment!
Please enter your name here