6 ವರ್ಷದ ಬಾಲಕಿಯನ್ನು ಅಪಹರಿಸಿ ಕ್ರೂರವಾಗಿ ಅತ್ಯಾಚಾರ ಎಸಗಿದ ಕಾಮುಕರು

0

 ಮನೆಯ ಹೊರಗೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿಯನ್ನು ಅಪಹರಿಸಿ ಕ್ರೂರವಾಗಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ.

ಹಾಪುರದ ಗರಮುಕ್ತೇಶ್ವರ ಕೊಟ್ವಾಲಿ ಪ್ರದೇಶದಲ್ಲಿ 6 ವರ್ಷದ ಬಾಲಕಿ ತನ್ನ ಮನೆಯ ಹೊರಗೆ ಆಟ ಆಡುತ್ತಿದ್ದಾಗ ಬೈಕಿನಲ್ಲಿ ಬಂದ ಕಾಮುಕರು ಆಕೆಯನ್ನು ಅಪಹರಿಸಿ ಕ್ರೂರವಾಗಿ ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಹಲ್ಲೆ ಮಾಡಿಹಳ್ಳಿಯ ಸಮೀಪವಿರುವ ಹೊಲದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಇತ್ತ ಬಾಲಕಿ ಕಾಣದಿದ್ದಾಗ ಆಕೆಯ ಪೋಷಕರು ಪೊಲೀಸರು ದೂರು ನೀಡಿದ್ದು, ಪೊಲೀಸರು ಹಾಗೂ ಗ್ರಾಮಸ್ಥರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾಗ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here